Breaking News

ಬಾಗೇಪಲ್ಲಿ | ಕಾರಿನಲ್ಲಿ ಅಗ್ನಿ ಅವಘಡ: ವ್ಯಕ್ತಿ ಸಾವು

ಬಾಗೇಪಲ್ಲಿ: ತಾಲ್ಲೂಕಿನ ಬಾಲರೆಡ್ಡಿಪಲ್ಲಿ ಬಳಿ ಭಾನುವಾರ ರಾತ್ರಿ ಕಾರಿನಲ್ಲಿ ಶಾರ್ಟ್ ಸರ್ಕಿಟ್‌ ಸಂಭವಿಸಿ ವ್ಯಕ್ತಿಯೊಬ್ಬರು ಸುಟ್ಟು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಉದಯ್‌ ಕುಮಾರ್‌ (65) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವಾಸವಾಗಿದ್ದ ಅವರು, ತಮ್ಮ ತಾಯಿ ಯೋಗಕ್ಷೇಮ ವಿಚಾರಿಸಲು ಭಾನುವಾರ ಮಧ್ಯಾಹ್ನ ಗ್ರಾಮಕ್ಕೆ ಬಂದಿದ್ದರು. ರಾತ್ರಿ ಬೆಂಗಳೂರಿಗೆ ಹಿಂದಿರುಗುವ ವೇಳೆ ಈ ಅವಘಡ ಸಂಭವಿಸಿದೆ. ಕಾರಿನಿಂದ ದಟ್ಟವಾದ ಹೊಗೆ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಪೊಲೀಸ್ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿ ನಂದಿಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬರು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸಿ ಮತ್ತು ಸರ್ಕಲ್ ಇನ್‌ಸ್ಪಕ್ಟರ್‌ ಅಜಯ್‌ ಸಾರಥಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *