Breaking News

ಷೇರು ಮರುಕಟ್ಟೆಯಲ್ಲಿ ಲಾಸ್ – ರೈಲಿಗೆ ತಲೆ ಕೊಟ್ಟ ವ್ಯಕ್ತಿ.!

ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಸ್ ಆಗಿದ್ದಕ್ಕೆ ಮನನೊಂದು ವ್ಯಕ್ತಿಯೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಹೆಬ್ಬಾಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ಷೇರು ಮಾರುಕಟ್ಟೆಯಲ್ಲಿ ಲಾಸ್ ಆಗಿದ್ದಲ್ಲದೇ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಮೃತ ವೆಂಕಟೇಶ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಅಲ್ಲದೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಸ್ ಕೂಡ ಆಗಿತ್ತು. ಜೊತೆಗೆ ಇತ್ತ ಸಾಲಗಾರರ ಕಾಟವು ಹೆಚ್ಚಾಗಿತ್ತು. ಇದೆಲ್ಲದರಿಂದ ಮನನೊಂದು ಹೆಬ್ಬಾಳ ಬಳಿಯಲ್ಲಿರುವ ರೈಲ್ವೆ ಟ್ರ‍್ಯಾಕ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಪಟ್ಟಂತೆ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು, ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೂರು ದಾಖಲಾಗಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *