Breaking News

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆ ದರೋಡೆಯ ಮಾಸ್ಟರ್‌ ಮೈಂಡ್ ಸೆರೆ

ಇತ್ತೀಚೆಗೆ ಪೊಲೀಸ್ ಅಧಿಕಾರಿ ಹೆಸರು ಹೇಳಿಕೊಂಡು ರಿಯಲ್‌ ಎಸ್ಟೇಟ್‌ ಉದ್ಯಮಿ ಹೊಂಬೇಗೌಡರ ಮನೆಗೆ ನುಗ್ಗಿ ಕೆ.ಜಿ.ಗಟ್ಟಲೇ ಚಿನ್ನಾಭರಣ ಹಾಗೂ 20 ಲಕ್ಷ ರೂ. ನಗದು ದರೋಡೆ ಮಾಡಿದ್ದ ಪ್ರಕರಣದ ಮಾಸ್ಟರ್‌ ಮೈಂಡ್‌ನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮನೆ ಮಾಲೀಕ ಹೊಂಬೇಗೌಡರ ಸ್ನೇಹಿತ, ಸ್ಟಾಂಪ್‌ ವೆಂಡರ್ ಬೆಟ್ಟೇಗೌಡ (52) ಬಂಧಿತ. ಇದೇ ಪ್ರಕರಣದಲ್ಲಿ ಈ ಹಿಂದೆ ಕೈದಿ ನಾಗೇಂದ್ರ ಮತ್ತು ಆತನ ಸಹಚರ ಬಚ್ಚನ್‌ ಎಂಬಾತನನ್ನು ಬಂಧಿಸಲಾಗಿತ್ತು. ಆರೋಪಿ ಬೆಟ್ಟಿಗೌಡನ ಸಂಚಿನಂತೆ ಫೆ.16ರಂದು ಹೊಂಬೇಗೌಡರ ಮನೆಗೆ ಪೊಲೀಸ್ ಸೋಗಿನಲ್ಲಿ ನುಗ್ಗಿ ದರೋಡೆ ಮಾಡಿ ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು. ಹೊಂಬೇಗೌಡರ ಆಪ್ತ ಸ್ನೇಹಿತನಾಗಿದ್ದ ಬೆಟ್ಟೇಗೌಡ, ಹೊಂಬೇಗೌಡರ ರಿಯಲ್‌ ಎಸ್ಟೇಟ್‌ ವ್ಯವಹಾರದ ಪೇಪರ್ ಕೆಲಸಗಳನ್ನು ಬೆಟ್ಟೇಗೌಡನೇ ಮಾಡುತ್ತಿದ್ದ. ಸ್ನೇಹಿತನ ಬಳಿ ಸೈಟ್ ಮಾರಿದ ಹಣವಿದೆ ಎಂಬ ವಿಷಯ ಈತನಿಗೆ ತಿಳಿದಿತ್ತು. ಜೈಲಿಂದ ಪೆರೋಲ್ ಮೇಲೆ ಹೊರಬಂದಿದ್ದ ನಾಗೇಂದ್ರಗೆ ಕರೆ ಮಾಡಿ ಸಂಚು ರೂಪಿಸಿದ್ದ. ಹೀಗಾಗಿ ಆರೋಪಿ ನಾಗೇಂದ್ರ ಸಹಚರ ಬಚ್ಚನ್‌ ಜತೆ ಸೇರಿ ಪೊಲೀಸ್ ಸಮವಸ್ತ್ರದಲ್ಲಿ ಹೊಂಬೇಗೌಡರ ಮನೆಗೆ ನುಗ್ಗಿ ದರೋಡೆ ಮಾಡಿದ್ದರು.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *