ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಹಲವು ಹಳೆಯ ದಾಖಲೆಗಳು ಮತ್ತು ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಇದು ಕಿಡಿಗೇಡಿಗಳ ಕೃತ್ಯವೇ ಅಥವಾ ಉದ್ದೇಶಪೂರ್ವಕ ಘಟನೆಯೇ ಎಂಬ ಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಾರ್ಯಾಲಯದ ಸಭಾಂಗಣ ಆವರಣ ಹೊತ್ತಿ ಉರಿದಿದ್ದು, ಸ್ಥಳಕ್ಕೆ ಹೊಸಪೇಟೆ ತಹಸೀಲ್ದಾರ್ ಶೃತಿ ಹಾಗೂ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇದು ಕಿಡಿಗೇಡಿಗಳ ಕೃತ್ಯನಾ ಅಥವಾ ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆಯಾ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

