Breaking News

ವಿಜಯಪುರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹೋಟೆಲ್ : ಲಕ್ಷಾಂತರ ಮೌಲ್ಯದ ವಸ್ತು ಸುಟ್ಟು ಭಸ್ಮ!

ಕಳೆದ ಕೆಲವು ತಿಂಗಳ ಹಿಂದೆ ವಿಜಯಪುರ ನಗರದಲ್ಲಿ ಕೃಷ್ಣ ಪ್ಯಾಲೇಸ್ ಹೋಟೆಲ್ , ಸಂಪೂರ್ಣವಾಗಿ ಸುಟ್ಟು ಬೆಂಕಿಗೆ ಆಹುತಿಯಾಗಿತ್ತು. ಇದೀಗ ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಹೊಟೇಲ್‌ವೊಂದರಲ್ಲ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಹೋಟೆಲ್‌ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಲಕ್ಷಾಂತರ ಮೌಲ್ಯದ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *