Breaking News

ಸೊರಬ: ಬೆಂಕಿ ಅವಘಡ, ಸಂಪೂರ್ಣ ಸುಟ್ಟುಹೋದ ಕಾರು

ಸೊರಬ (ಶಿವಮೊಗ್ಗ): ತಾಲ್ಲೂಕಿನ‌ ಸಾಗರ ರಸ್ತೆಯ ಮಳಲಗದ್ದೆ-ಅವಲಗೋಡು ಮಾರ್ಗ ಮಧ್ಯೆ ಚಲಿಸುತ್ತಿದ್ದ ಕಾರಿನಲ್ಲಿ‌ ಮಂಗಳವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಪಟ್ಟಣದ ದೊಡ್ಡಪೇಟೆಯ ಸಚಿನ್ ಎಂಬುವರಿಗೆ ಸೇರಿದ ಪೋರ್ಡ್ ಕಾರಿನಲ್ಲಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಾರು ಸುಟ್ಟು ಕರಕಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೆ ಅಷ್ಟರಲ್ಲಿ ಕಾರು ಸಂಪೂರ್ಣ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿತ್ತು. ಅದೃಷ್ವವಶಾಥ್ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *