Breaking News

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕಾರ್ಕಳ: ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾರ್ಕಳ ನಗರ ಪೊಲೀಸರು ಶಿವಮೊಗ್ಗದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಇಬ್ರಾಹಿಂ ಅಲಿಯಾಸ್ ಇಬ್ಬು ಎಂದು ಗುರುತಿಸಲಾಗಿದೆ. ಈತ ಕಾರ್ಕಳ ನಗರ ಪೊಲೀಸ್ ಠಾಣೆಯ ಅಪರಾಧ ಪ್ರಕರಣದಲ್ಲಿ ಆರೋಪಿಯಾಗಿದ್ದು, ಪೊಲೀಸ್‌ ಇಲಾಖೆ ಕಣ್ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ಕಾರ್ಕಳ ನಗರ ಠಾಣೆಯ ವಾರಂಟ್ ಸಿಬಂದಿ ಲೋಕೇಶ್, ಸಂಜಯ್ ಅವರು ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *