ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಮೊದಲಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಬಗ್ಗೆ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

