Breaking News

ಉಪ್ಪಿನಂಗಡಿ: ಅಕ್ರಮ ದಾಸ್ತಾನು ಮಾಡಿದ್ದ 4,175 ಲೀಟರ್‌ ಡಿಸೇಲ್ ಜಪ್ತಿ

ಅಕ್ರಮವಾಗಿ ದಾಸ್ತಾನು ಮಾಡಿದ್ದ 4,175 ಲೀಟರ್‌ ಡಿಸೇಲ್ ಅನ್ನು ಬೆಳ್ತಂಗಡಿ ಡಿವೈಎಸ್ಪಿ. ರೋಹಿಣಿ ಸಿ.ಕೆ. ನೇತೃತ್ವದ ತಂಡ ಜಪ್ತಿ ಮಾಡಿದೆ. ಬೆಳ್ತಂಗಡಿ ತಾಲ್ಲೂಕಿನ ಕಣಿಯೂರು ಗ್ರಾಮದ ಜಗದೀಶ್ ಎಂಬಾತ ಶೆಡ್‌ನಲ್ಲಿ ಅಕ್ರಮವಾಗಿ ಡೀಸೆಲ್ ದಾಸ್ತಾನು ಮಾಡಿದ್ದ. ಪೊಲೀಸರು ದಾಳಿ ನಡೆಸಿ 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್‌ಗಳು ಹಾಗೂ 35 ಲೀಟರ್ ಸಾಮರ್ಥ್ಯ 5 ಕ್ಯಾನ್‌ಗಳಲ್ಲಿ ಒಟ್ಟು 4,175 ಲೀಟರ್‌ ಡೀಸೆಲ್ ಜಪ್ತಿ ಮಾಡಿದರು. ಇವುಗಳ ಮೌಲ್ಯ ₹3.50 ಲಕ್ಷ ಎಂದು ಅಂದಾಜಿಸಲಾಗಿದೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *