Breaking News

ಶಾಲಾ ಕಟ್ಟಡದಿಂದ ಜಿಗಿದು ಬಾಲಕಿ ಆತ್ಮಹತ್ಯೆ – ಸಹಪಾಠಿಯ ಕಿರುಕುಳ ಆರೋಪ

ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲ್ಲೂಕಿನ ಭೆಮಳಖೇಡ ಗ್ರಾಮದಲ್ಲಿ ಶಾಲಾ ಕಟ್ಟಡದಿಂದ ಜಿಗಿದು 16 ವರ್ಷದ ಬಾಲಕಿ ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿ ಮದಿಯಾ ಚಿಕ್ಕಪ್ಪ ಎಂ.ಡಿ. ಯೂಸುಫ್ ಹೇಳಿಕೆಯಲ್ಲಿ, ಸಹಪಾಠಿಯ ಲವ್ ಮಾಡುವಂತೆ ಕಿರುಕುಳ ನೀಡಿರುವುದೇ ಆಕೆಯ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಸಹಪಾಠಿಯ ಕಿರುಕುಳದ ದೃಶ್ಯಗಳು ಸಿಸಿ ಕ್ಯಾಮರಾಗಳಲ್ಲಿ ಸೆರೆಹಿಡಿಯಲ್ಪಟ್ಟಿವೆ. ಸ್ಥಳೀಯರು ಆತಂಕ ವ್ಯಕ್ತಪಡಿಸಿರುವ ಈ ಪ್ರಕರಣದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಹೂವಿನ ಬ್ಯಾಗ್ ಇಡುವ ವಿಚಾರಕ್ಕೆ ಶುರುವಾಯ್ತು ಕಿರಿಕ್ – ಹೊಸಕೋಟೆ ಮಾರ್ಕೆಟ್‌ನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ!

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ರಾಘವೇಂದ್ರ ಸರ್ಕಲ್ ಬಳಿಯ ಹೂವಿನ ಮಾರುಕಟ್ಟೆಯಲ್ಲಿ ಸಣ್ಣ ವಿಚಾರಕ್ಕೆ ಎರಡು ಗ್ರಾಮಗಳ ಯುವಕರ …

Leave a Reply

Your email address will not be published. Required fields are marked *