Breaking News

ಗಾಂಜಾ ನಶೆಯಲ್ಲಿ ಕಿರಿಕ್ – ಗೆಳೆಯನ ಕುತ್ತಿಗೆ ಸೀಳಿ ಹತ್ಯೆ!

ಚಾಮರಾಜನಗರದಲ್ಲಿ ಭೀಕರ ದುರಂತ ನಡೆದಿದ್ದು, ಗಾಂಜಾ ನಶೆಯಲ್ಲಿ ವ್ಯಕ್ತಿಯ ಹತ್ಯೆಯಾಗಿದೆ. ಸ್ನೇಹಿತನ ಜೊತೆ ಎಣ್ಣೆ ಪಾರ್ಟಿಗೆ ಹೋದಾಗ ಯುವಕನ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ದೊಡ್ಡಕೆರೆ ಬಳಿ ಕೊಲೆ ನಡೆದಿದೆ. ಕತ್ತು ಸೀಳಿದ ಸ್ಥಿತಿಯಲ್ಲಿ ನಂಜುಂಡಸ್ವಾಮಿ (22) ಎಂಬಾತನ ಯುವಕನ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ಸ್ನೇಹಿತನ ಜೊತೆಗೆ ನಂಜುಂಡಸ್ವಾಮಿ ಎಣ್ಣೆ ಪಾರ್ಟಿಗೆ ತೆರಳಿದ್ದಾನೆ ಗಾಂಜಾ ಮತ್ತಿನಲ್ಲಿ ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಶೆಯಲ್ಲಿ ಸ್ನೇಹಿತರ ನಡುವೆ ಗಲಾಟೆ ಆಗಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಓರ್ವವನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಘಟನೆ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *