Breaking News

ಅಪ್ರಾಪ್ತೆ ಮೇಲೆ ಅತ್ಯಾಚಾರ: ಕಾಮುಕ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಕಾಮುಕನಿಗೆ ಶಿವಮೊಗ್ಗ ಕೋರ್ಟ್ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ. 16 ವರ್ಷದ ಬಾಲಕಿಯನ್ನು ನಂಬಿಸಿ ಲೈಂಗಿಕ ದೌರ್ಜನ್ಯ ವೆಸಗಿದ 23 ವರ್ಷದ ಯುವಕ ಜೈಲು ಶಿಕ್ಷಗೆ ಗುರಿಯಾದವನು. ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಠಾಣೆಯಲ್ಲಿ ಪೋಕ್ಸೋ ಹಾಗೂ ಎಸಿ, ಎಸ್ ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಡಿವೈ ಎಸ್ ಪಿ ಕೇಶವ ಕೆ.ವಿ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಸಂತ್ರಸ್ತ ಬಾಲಕಿ ಸಾವನ್ನಪ್ಪಿದ್ದು, ಮೃತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ೪ ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶ ನೀಡಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *