ಗುಂಡ್ಯ ಚೆಕ್ ಪೋಸ್ಟ್ ಬಳಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಪತ್ತೆ ಹಚ್ಚಿದ ಪೊಲೀಸರು ನಾಲ್ಕು ಹೋರಿಗಳ ಸಹಿತ ವಾಹನ ಚಾಲಕನನ್ನು ಬಂಧಿಸಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಬಂಧಿತ ಗೂಡ್ಸ್ ಟೆಂಪೊ ಚಾಲಕನನ್ನು ಕುಮಾರ್ ಎಂದು ಗುರುತಿಸಲಾಗಿದೆ. ಈತ ಕಾಸರಗೋಡಿನ ಕಸಾಯಿಖಾನೆಗೆಂದು ಅರಸೀಕೆರೆಯಿಂದ ನಾಲ್ಕು ಹೋರಿಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪ್ರೊಬೆಷನರಿ ಎಎಸ್ಪಿ ಅನನ್ಯ ಶ್ರೀವಾಸ್ತವ್ ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಗುಂಡ್ಯ ಚೆಕ್ ಪೋಸ್ಟ್ ಬಳಿ ಕಾರ್ಯ ನಿರತ ಪೊಲೀಸರು ತಪಾಸನೆ ಕೈಗೊಂಡಾಗ ಕೃತ್ಯ ಬೆಳಕಿಗೆ ಬಂದಿದ್ದು, ಅಕ್ರಮ ಸಾಗಾಟಕ್ಕೆ ಬಳಸಿದ ಗೂಡ್ಸ್ ಟೆಂಪೊ ಸಹಿತ ವಾಹನ ಚಾಲಕ ಕುಮಾರ್ ನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

