Breaking News

ಗಾಂಜಾ ಸಾಗಿಸುತ್ತಿದ್ದವನ ಬಂಧನ; ಓಡಿ ಹೋದ ನಾಲ್ವರು

ಶಿಗ್ಗಾಂವಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವಾಹನ ಜಪ್ತಿ ಮಾಡಿದ ಪೊಲೀಸರು 1.53 ಲಕ್ಷ ರೂ. ಮೌಲ್ಯದ 3014 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಂಡ ಘಟನೆ ತಾಲೂಕಿನ ವಡಗಟ್ಟಾ ನಾಕಾ ಬಳಿ ನಡೆದಿದೆ. ಹಾನಗಲ್ಲ ತಾಲೂಕು ಬೊಮ್ಮನಹಳ್ಳಿಯ ಇಮಾಮ್ ಖಾಸೀಂ ನೂರ್ ಅಹ್ಮದ್ ಮಕಾನದಾರ (25), ಸದ್ದಾಂ ನೂರ ಅಹ್ಮದ್ ಮಕಾನದಾರ, ರಹೀಮ ಮಕಾನದಾರ, ರಶೀದ್ ಮರದಾನಸಾಬ ವಾಗಿನಕೊಪ್ಪ ಹಾಗೂ ವಹಾಬ್ ನನ್ನೆಸಾಬ ಹನಕನಹಳ್ಳಿ ಎಂಬುವರು ಟಾಟಾ ಇಂಟ್ರಾ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗಾಂಜಾ ಸಮೇತ ವಾಹನ ಚಾಲಕನನ್ನು ಬಂಧಿಸಿದ್ದಾರೆ. ಇನ್ನೂ ನಾಲ್ವರು ಆರೋಪಿಗಳು ತಲೆಮರಿಸಿಕೊಂಡಿದ್ದಾರೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *