ನಗರದಲ್ಲಿ ಅಕ್ರಮವಾಗಿ ನೆಲಸಿರುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು, ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಬಾಂಗ್ಲಾದೇಶದ ಇಬ್ಬರು ಪ್ರಜೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜುಯಿಮೋನೆ (17) ಹಾಗೂ ಮೊಹಮ್ಮದ್ ಉಮರ್(23) ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿಗೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ಹೇಳಿದರು. ಎರಡೂವರೆ ವರ್ಷಗಳ ಹಿಂದೆ ಪಶ್ಚಿಮ ಬಂಗಾಳದ ಮಧ್ಯವರ್ತಿಯ ಸಹಾಯ ಪಡೆದು, ಬೆಂಗಳೂರಿಗೆ ಬಂದಿದ್ದ ಇಬ್ಬರು ಈ ಹಿಂದೆ ಬನ್ನೇರುಘಟ್ಟ, ಹೆಬ್ಬಗೋಡಿ ಭಾಗದಲ್ಲಿ ವಾಸವಾಗಿದ್ದರು. ಆ ಸ್ಥಳಗಳಲ್ಲಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರಿಂದ ಇಬ್ಬರು ಕೊತ್ತನೂರು ಠಾಣೆ ವ್ಯಾಪ್ತಿಯ ಕೆ.ನಾರಾಯಣಪುರಕ್ಕೆ ಬಂದು ನೆಲಸಿದ್ದರು. ಜುಯಿಮೋನೆ ಅವರು ‘ವಿಂಡ್ಸಮ್ ಟ್ರೀ ಕಮ್ಯುನಿಟಿ’ ಎಂಬ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಮೊಹಮ್ಮದ್ ಉಮರ್ ಚಿಂದಿ ಆಯುವ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

