ಬೆಳ್ತಂಗಡಿ: ಶಿರಾಡಿ ಘಾಟಿಯಲ್ಲಿ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ. ಕಾರಿನಲ್ಲಿದ್ದ ಕೊಕ್ಕಡದ ಉದ್ಯಮಿ ಚಂದ್ರಶೆಖರ, ಕಕ್ಕಿಂಜೆಯ ಶ್ರೀಧರ ಹಾಗೂ ಜನಾರ್ದನ ಎಂಬವರು ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ. ಕಾರು ಮತ್ತು ಬಸ್ ಮುಖಾಮುಖಿಯಾಗಿ ಢಿಕ್ಕಿ ಹೊಡೆದಿದ್ದು, ಹೊಡೆತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

