ಬೆಂಗಳೂರು: ಹಣದ ಆಸೆಗೆ 15 ವರ್ಷದ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ ಹಾಗೂ ಮಲತಂದೆಯ ವಿರುದ್ಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯ ತಾಯಿ, ಆಕೆಯ ಮಲತಂದೆ ಹಾಗೂ ಮತ್ತೊಬ್ಬ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ತಾಯಿ ಹಾಗೂ ಮಲತಂದೆ ಕಾರಿನಲ್ಲಿ ಪ್ರತಿದಿನ ಬಾಲಕಿಯನ್ನು ಮಹಿಳೆಯ ಮನೆಗೆ ಕರೆದೊಯ್ದು ಬಿಡುತ್ತಿದ್ದರು. ಅಲ್ಲಿ ಬಾಲಕಿ ಸಂಜೆವರೆಗೂ ಇರುತ್ತಿದ್ದಳು. ಅಲ್ಲಿ ಬಾಲಕಿಯ ಮೇಲೆ ದೌರ್ಜನ್ಯ ಎಸಗಲಾಗುತ್ತಿತ್ತು ಎಂದು ಮೂಲಗಳು ಹೇಳಿವೆ. ‘ಬಾಲಕಿಯನ್ನು ರಕ್ಷಿಸಲಾಗಿದೆ. ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

