ಪುತ್ತೂರು: ಆರ್ಯಾಪು ಗ್ರಾಮದಲ್ಲಿಸರಕಾರದ ಯೋಜನೆ ಅಡಿಯಲ್ಲಿ ಮನೆ ಮಂಜೂರಾತಿಗಾಗಿ ನೀಡಲಾಗುವ 1.5 ಲಕ್ಷ ರೂ. ಅನ್ನು ನಕಲಿ ದಾಖಲೆ ಸಲ್ಲಿಸಿ ಪಡೆದುಕೊಂಡ ಪ್ರಕರಣದ ಆರೋಪಿಗಳಿಗೆ ಪುತ್ತೂರು ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿಗಳಾದ ಬಾಬು ಮೇರ, ಜ್ಯೋತಿ ಹಾಗೂ ತನಿಯ ಮೇರ ವಿರುದ್ದ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗ್ರಾಮಾಂತರ ಠಾಣೆಯ ಅಂದಿನ ಪೊಲೀಸ್ ಉಪ ನಿರೀಕ್ಷಕರಾಗಿದ್ದ ಉದಯರವಿ ಮತ್ತು ಶಕ್ತಿವೇಲು ಅವರು ತನಿಖೆ ನಡೆಸಿ ಆರೋಪಿಗಳ ವಿರುದ್ಧ ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಾಲಯವು ಆರೋಪಿಗಳಿಗೆ 3 ವರ್ಷ ಸದಾ ಸಜೆ, 5 ಸಾ. ರೂ. ದಂಡ ವಿಧಿಸಿದೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿ 3 ತಿಂಗಳ ಸದಾ ಜೈಲು ಶಿಕ್ಷೆ ಅನುಭವಿಸಲು ಆದೇಶಿಸಿದೆ. ಸಹಾಯಕ ಸರಕಾರಿ ಅಭಿಯೋಜಕಿ ಚೇತನಾ ದೇವಿ ವಾದ ಮಂಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

