Breaking News

ಬಾಲಕ ಚಲಾಯಿಸಿದ ಕಾರು ಅಪಘಾತ: ತಾಯಿ ವಿರುದ್ಧ ಪ್ರಕರಣ

ಪುತ್ತೂರು: ಅಪ್ರಾಪ್ತ ವಯಸ್ಕನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಹಿನ್ನೆಲೆಯಲ್ಲಿ ವಾಹನದ ಮಾಲಕಿ, ಬಾಲಕನ ತಾಯಿ ಪುತ್ತೂರು ನಿವಾಸಿ ಕೆ.ಎ. ಮಮತಾಜ್‌ (42) ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾ.12 ರಂದು ಸಂಜೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಸಂಟ್ಯಾರ್‌ ಜಂಕ್ಷನ್ ಬಳಿ ಬಾಲಕ ಚಲಾಯಿಸುತ್ತಿದ್ದ ಕಾರು ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಕಾರು ಢಿಕ್ಕಿ ಹೊಡೆದು ಬೈಕ್‌ನ ಸಹಸವಾರ ಬಂಟ್ವಾಳ ನಿವಾಸಿ ರವಿ ಬಿ. (27) ಹಾಗೂ ಸವಾರ ಕಾರ್ತಿಕ್‌ ಗಾಯಗೊಂಡಿದ್ದರು. ಈ ಬಗ್ಗೆ ರವಿ ಬಿ. ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *