ಪುತ್ತೂರು: ಅಪ್ರಾಪ್ತ ವಯಸ್ಕ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣದಲ್ಲಿ ವಾಹನದ ನೋಂದಣಿ ಮಾಲಕರಿಗೆ ನ್ಯಾಯಾಲಯ 20 ಸಾವಿರ ರೂ. ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿದೆ. 2025ರ ಆ. 31ರಂದು ಪುತ್ತೂರು ಕಸಬಾ ಗ್ರಾಮದ ಕ್ಯಾಂಪ್ಕೋ ಕಚೇರಿ ಎದುರು ಅಪ್ರಾಪ್ತ ವಯಸ್ಕ ಬಾಲಕನೊಬ್ಬ ದ್ವಿಚಕ್ರ ವಾಹನವನ್ನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿ ಇನ್ನೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದನು. ಈ ಸಂಬಂಧ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ಬಳಿಕ ಅಪ್ರಾಪ್ತ ವಯಸ್ಕ ಬಾಲಕನಿಗೆ ವಾಹನ ನೀಡಿದ ನೋಂದಣಿ ಮಾಲಕರಿಗೆ ನ್ಯಾಯಾಲಯ ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

