Breaking News

ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ

ಆನಂದಪುರ: ತಾಳಗುಪ್ಪದಿಂದ ಮೈಸೂರಿಗೆ ತೆರುಳುತ್ತಿದ್ದ ಮೈಸೂರ್ ಇಂಟರ್ ಸಿಟಿ ರೈಲಿಗೆ ಆನಂದಪುರ ಸಮೀಪ ನವ ಟೂರ್ ಬಳಿ ಓರ್ವ ವ್ಯಕ್ತಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.14ರ ಶನಿವಾರ ಮಧ್ಯಾಹ್ನ ನಡೆದಿದೆ. ನವಟೂರ್ ಗ್ರಾಮದ ಭದ್ರಾಚಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.ತಾಳಗುಪ್ಪದಿಂದ ಮೈಸೂರಿಗೆ ತೆರಳುತ್ತಿದ್ದ ಇಂಟರ್ ಸಿಟಿ ರೈಲು 3.30ರ ಸುಮಾರಿಗೆ ಮೈಸೂರು ಕಡೆಗೆ ಚಲಿಸುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಈ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದ ಎಂದು ಕೆಲ ಮೂಲಗಳಿಂದ ತಿಳಿದು ಬಂದಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *