Breaking News

ಹುಬ್ಬಳ್ಳಿಯಲ್ಲಿ ಕಳ್ಳರ ಅಟ್ಟಹಾಸ ಮುಂದುವರಿಕೆ: ಅಂಗಡಿ ಮುಂದೆ ನಿಲ್ಲಿಸಿದ್ದ ವಾಹನ ಎಗರಿಸಿದ ಕಳ್ಳರು…

ಹುಬ್ಬಳ್ಳಿ: ನಗರದಲ್ಲಿ ಹಾಡಾಗಲೇ ಕಳ್ಳರ ಹಾವಳಿ ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜನ ಸಂಚಾರ ಇರುವ ಸಮಯದಲ್ಲೇ ಅಂಗಡಿ ಮುಂದೆ ನಿಲ್ಲಿಸಿದ್ದ ವಾಹನವನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ…

ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಅಂಗಡಿ ಮುಂಭಾಗ ನಿಲ್ಲಿಸಿದ್ದ ವಾಹನವನ್ನು ಕಳ್ಳರು ಹಾಡಾಗಲೇ ಕದ್ದು ಪರಾರಿಯಾಗಿದ್ದಾರೆ. ಈ ಸಂಪೂರ್ಣ ಘಟನೆ ಸಮೀಪದಲ್ಲಿದ್ದ ಸಿಸಿಟಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ…

ಹಾಡಾಗಲೇ ನಡೆದ ಈ ಕಳ್ಳತನ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ. ನಗರದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ…

ಈ ಕುರಿತು ವಾಹನದ ಮಾಲೀಕರು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Share News

About Shaikh BigTv

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *