Breaking News

ರೀಲ್ಸ್ ವೇಳೆ ಯಡವಟ್ಟು.. ಕಟ್ಟಡದಿಂದ ಬಿದ್ದು ಬಾಲಕ ದುರ್ಮರಣ..!

ಬೆಂಗಳೂರಿನಲ್ಲಿ ಘಟನೆ ನಡೆದಿದ್ದು, ಮೃತ ವಿದ್ಯಾರ್ಥಿಯನ್ನು ನಿಶಾಂತ್ ಎಚ್ ಎಂದು ಗುರುತಿಸಲಾಗಿದೆ. 10ನೇ ತರಗತಿ ಓದುತ್ತಿದ್ದ ಆತ ಇತ್ತೀಚೆಗೆ ತನ್ನ CBSE ಪರೀಕ್ಷೆಗಳನ್ನು ಬರೆದಿದ್ದನು. ಪರೀಕ್ಷೆಗಳು ಮುಗಿದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಹೊರಗೆ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ನಿಶಾಂತ್ ಶುಕ್ರವಾರ ಸಂಜೆ ಸುಮಾರು 4.30ರ ವೇಳೆಗೆ ಉಲ್ಲಾಳದ ಮನೆಯಿಂದ ಹೊರಟಿದ್ದನು. ಮೂವರು ಸ್ನೇಹಿತರ ಜತೆ ಸೇರಿ ರೀಲ್ಸ್ ಚಿತ್ರೀಕರಿಸಲು ಡಿ-ಗ್ರೂಪ್ ಲೇಔಟ್‌ನಲ್ಲಿರುವ ಕಟ್ಟಡದ ಬಳಿ ತೆರಳಿದ್ದನು. ರೀಲ್ಸ್ ಚಿತ್ರೀಕರಣದ ವೇಳೆ ನಿಶಾಂತ್ ಕಟ್ಟಡದ ಮೇಲ್ಭಾಗಕ್ಕೆ ಹತ್ತಿ ವಿಡಿಯೋ ಮಾಡಲು ಯತ್ನಿಸಿದಾಗ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯ ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಿಶಾoತ್ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಮನೆ ಮಗನನ್ನು ಕಳೆದುಕೊಂಡು ಕುಟುಂಬ ಸದಸ್ಯರು ಕಂಗಾಲಾಗಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *