ದೊಡ್ಡಬಳ್ಳಾಪುರ: ಸ್ನೇಹಿತನ ಹುಟ್ಟು ಹಬ್ಬ ಆಚರಣೆಯಲ್ಲಿ ಮದ್ಯ ಸೇವನೆಗೆ ಹಣ ಇಲ್ಲದೆ ತಾಲ್ಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಯದ ವಿದ್ಯಾರ್ಥಿಗಳನ್ನು ಮಾರ್ಚ್ 11 ರಂದು ರಾತ್ರಿ ಅಡ್ಡಗಟ್ಟಿ ಹಲ್ಲೆ ನಡೆಸಿ ಮೊಬೈಲ್ ಕಸಿದುಕೊಂಡು ಹಾಗೂ ಪೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡು ಪರಾರಿಯಾಗಿದ್ದ ಐವರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಾಲ್ಲೂಕಿನ ಸೊಣ್ಣಪ್ಪನಹಳ್ಳಿ ಗ್ರಾಮದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿರುವ ಆನಂದಕುಮಾರ್(25), ಚಾಲಕ ತಿಲಕ್ (19) ಗಾರೆ ಕೆಲಸಗಾರ ಆಕಾಶ್(21), ಚಾಲಕ ಮುನೇಗೌಡ (21), ಕೋಲಾರ ಜಿಲ್ಲೆಯ ಮಾಲೂರು ಮೂಲದ ಅಕ್ಷಯ್ ಕುಮಾರ್ ಬಂಧಿತರು. ಮತ್ತೊಬ್ಬ ಆರೋಪಿ ಗೌತಮ್ ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಸಲಾಗುತ್ತಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

