Breaking News

ಯುವಕನಿಗೆ ಚೂರಿ ಇರಿತ

ಸುಳ್ಯ: ಬಾರ್ ಬಳಿ ಯುವಕನಿಗೆ ಚೂರಿ ಇರಿದ ಘಟನೆ ಸುಳ್ಯದಲ್ಲಿ ಶನಿವಾರ ಸಂಭವಿಸಿದೆ. ಸುಳ್ಯ ಬೀರಮಂಗಲದ ಹರೀಶ್ ಚೂರಿ ಇರಿತದಿಂದ ಗಾಯಗೊಂಡ ಯುವಕ. ಹರೀಶ್ ಹಾಗೂ ಇತರರು ಬಾರ್ ಬಳಿ ಇದ್ದ ವೇಳೆ ಚೂರಿ ಇರಿಯಲಾಗಿದೆ ಎನ್ನಲಾಗಿದೆ. ಹರೀಶ್ ಜತೆಗಿದ್ದ ಇನ್ನೋರ್ವ ವ್ಯಕ್ತಿಗೂ ಗಾಯವಾಗಿದೆ. ಘಟನೆಯಲ್ಲಿ ಇಬ್ಬರೂ ಸಣ್ಣ ಪ್ರಮಾಣದಲ್ಲಿ ಗಾಯಗೊಂಡಿದ್ದು, ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *