ಮೃತ ಪೊಲೀಸ್ ಅಧಿಕಾರಿಗಳ ಫೋಟೋ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ..
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಮೂವರು ಪೊಲೀಸ್ ಸಿಬ್ಬಂದಿಗಳು ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಸ್ನೇಹಿತನ ಮದುವೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ವೇಗವಾಗಿ ಸಾಗುತ್ತಿದ್ದ ಕಾರು ಮುಂದೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಪೊಲೀಸ್ ಸಿಬ್ಬಂದಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ…

ಮೃತರನ್ನು ರಿಸರ್ವ್ ಪೊಲೀಸ್ ಸಿಬ್ಬಂದಿಗಳಾದ ಆರ್‌ಎಸ್‌ಐ ಮಂಜುನಾಥ್ (32), ಆರ್‌ಎಸ್‌ಐ ಅಮರೇಶ್ ಹಾಗೂ ಆರ್‌ಎಸ್‌ಐ ಸಚಿನ್ ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಆರ್‌ಎಸ್‌ಐ ಮಹಂತೇಶ್ ಮತ್ತು ಪಿಎಸ್‌ಐ ಈಶ್ವರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣ ಪತ್ತೆಗೆ ತನಿಖೆ ಮುಂದುವರಿದಿದೆ.ಇದೀಗ, ಭೀಕರ ಅಪಘಾತದಲ್ಲಿ ಮೃತಪಟ್ಟ ಮೂವರು ಪೊಲೀಸ್ ಅಧಿಕಾರಿಗಳ ಫೋಟೋಗಳನ್ನು ಪೊಲೀಸ್ ಇಲಾಖೆ ಬಿಡುಗಡೆ ಮಾಡಿದೆ, ಮೃತರಿಗೆ ಪೊಲೀಸ್ ಇಲಾಖೆ ಹಾಗೂ ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

