Breaking News

ಸಿಲಿಂಡರ್ ಅಭಾವದ ನಡುವೆ ಅಕ್ರಮ ದಾಸ್ತಾನು, ಬೆಂಗಳೂರಲ್ಲಿ ನಾಲ್ಕು ಪ್ರಕರಣ ದಾಖಲು

ರಾಜ್ಯ ಸೇರಿದಂತೆ ರಾಜಧಾನಿ ಬೆಂಗಳೂರಿನಲ್ಲಿ ಅಡುಗೆ ಅನಿಲದ ತೀವ್ರ ಅಭಾವ ಎದುರಾಗಿದೆ. ಪಶ್ಚಿಮ ಏಷ್ಯಾದ ಸಂಘರ್ಷದ ಪರಿಣಾಮವಾಗಿ ಎಲ್‌ಪಿಜಿ ಪೂರೈಕೆ ಕುಸಿದಿದ್ದು, ಜನಸಾಮಾನ್ಯರು ಕಂಗೆಟ್ಟಿದ್ದಾರೆ. ಆದ್ರೆ ಸಿಲಿಂಡರ್‌ಗಳ ತೀವ್ರ ಕೊರತೆಯನ್ನು ಬಂಡವಾಳವಾಗಿಸಿಕೊಂಡಿರುವ ಕೆಲವರು ಅಕ್ರಮವಾಗಿ ಗ್ಯಾಸ್ ದಾಸ್ತಾನು ಮಾಡುತ್ತಿದ್ದು, ಪೊಲೀಸರು ನಗರದ ಪೀಣ್ಯ, ಕೆಂಗೇರಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಈ ಬಿಕ್ಕಟ್ಟಿನಿಂದಾಗಿ ಹೋಟೆಲ್ ಉದ್ಯಮವು ಸಂಕಷ್ಟಕ್ಕೆ ಸಿಲುಕಿದ್ದು, ಅನಿಲ ಸಿಗದೆ ಹಲವು ಆಹಾರ ಮಂದಿರಗಳು ಬಾಗಿಲು ಹಾಕಿವೆ. ತೆರೆದಿರುವ ಹೋಟೆಲ್‌ಗಳಲ್ಲಿಯೂ ಲಭ್ಯವಿರುವ ತಿಂಡಿಗಳ ಪಟ್ಟಿಯನ್ನು ಸೀಮಿತಗೊಳಿಸಲಾಗಿದೆ. ಇತ್ತ ಸಾಮಾನ್ಯ ಜನರು ಮನೆಬಳಕೆಯ ಅನಿಲಕ್ಕಾಗಿ ಏಜೆನ್ಸಿಗಳ ಮುಂದೆ ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲುವಂತಾಗಿದೆ. ಕೃತಕ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಸಿಲಿಂಡರ್ ಮಾರಾಟ ಮಾಡುವ ಜಾಲದ ವಿರುದ್ಧ ಪೊಲೀಸರು ಈಗ ನಿಗಾ ವಹಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *