ಪೊಲೀಸ್ ವಶದಲ್ಲಿದ್ದ ಕುಖ್ಯಾತ ಮಹಿಳಾ ಆರೋಪಿ ರಾತ್ರಿ ವೇಳೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ಇಲ್ಲಿನ ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಲ್ಲಿ ನಡೆದಿದೆ. ತಮಿಳು ನಾಡಿನ ಹೊಸೂರು ಮೂಲದ ಮಾಲಾ (40) ಪರಾರಿಯಾಗಿರುವ ಕಳ್ಳಿ. ಮಾಗಡಿ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರನ್ನು ನಂಬಿಸಿ 350 ಗ್ರಾಂ ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಕೆಯನ್ನು ಬಂಧಿಸಿದ್ದ ಪೊಲೀಸರು, ಜಿಲ್ಲಾ ಆಸ್ಪತ್ರೆಯಲ್ಲಿದ್ದ ಸಖಿ ಕೇಂದ್ರದಲ್ಲಿ ಇರಿಸಿ ವಿಚಾರಣೆ ನಡೆಸುತ್ತಿದ್ದರು. ಗುರುವಾರ ರಾತ್ರಿ 12.30ರ ಸುಮಾರಿನಲ್ಲಿ ಕಾವಲಿಗೆ ಇದ್ದ ಪೊಲೀಸ್ ಸಿಬ್ಬಂದಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾಳೆ. ಈಕೆ ಹಲವು ಕಳವು ಪ್ರಕರಣದ ಆರೋಪಿಯಾಗಿದ್ದು, ಪೊಲೀಸರಿಗೆ ಬೇಕಾಗಿದ್ದಳು.
bigtvnews | Hubli Dharwad News | Kannada News | Karnataka News Hubli News | News In Hubli | Local news

