ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.ನಗರದ ದಾಸರಕೊಪ್ಪಲಿನ ನಿವಾಸಿ ಲೋಕೇಶ್ (45) ಆತ್ಮಹತ್ಯೆಗೆ ಶರಣಾದವರು. ಅವರು ಹಾಸನದ ಗುಡ್ಡೆನಹಳ್ಳಿ ಯಲ್ಲಿರುವ ಎರಡು ಹಾಸ್ಟೆಲ್‌ಗಳಿಗೆ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದರು.ಕೆಲವು ದಿನಗಳ ಹಿಂದಷ್ಟೇ ಅವರಿಗೆ ಬಡ್ತಿ ಲಭಿಸಿ ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ರಾತ್ರಿ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ನಗರದ Pension Mohalla ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

