Breaking News

ಬಸ್ -ಬೈಕ್ ಢಿಕ್ಕಿ; ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169 ಹಾದು ಹೋಗುವ ಪುತ್ತಿಗೆ ಗ್ರಾ.ಪಂ. ವ್ಯಾಪ್ತಿಯ ಹಂಡೇಲು ಸುತ್ತು ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ಘಟಿಸಿದೆ. ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಮೈಸೂರು ಮೂಲದ ಸಮೃದ್ಧ್ ಮೃತಪಟ್ಟವರು. ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿದ್ದ ಕ್ರೀಡಾಕೂಟದಿಂದ ಮಿಜಾರ್ ನಲ್ಲಿರುವ ಹಾಸ್ಟೆಲ್ ಗೆ ಸಮೃದ್ಧ್‌ ಸಹಪಾಠಿ ನಿಶಾಂತ್ ಜತೆ ಬೈಕ್ ನಲ್ಲಿ ಸಾಗುತ್ತಿದ್ದಾಗ ಮಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದು ತೀವ್ರ ವಾಗಿ ಗಾಯಗೊಂಡ ಸಮೃದ್ಧ್‌ ಸ್ಥಳದಲ್ಲಿಯೇ ಅಸುನೀಗಿದರು. ನಿಶಾಂತ್ ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *