Breaking News

ಸುಳ್ಯ -ಬಾರ್ ಎದುರು ನಿಂತಿದ್ದ ಯುವಕರಿಗೆ ಚೂರಿ ಇರಿತ, ಆರೋಪಿಗಳು ಪೊಲೀಸ್ ವಶಕ್ಕೆ

ಸುಳ್ಯದ ಶ್ರೀರಾಂಪೇಟೆಯಲ್ಲಿರುವ ರಾಜೇಶ್ ಬಾರ್ ಮುಂಭಾಗದಲ್ಲಿ ನಿಂತಿದ್ದ ಯುವಕರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಶನಿವಾರ ಸಂಜೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.ಸುಳ್ಯ ಬೀರಮಂಗಲದ ಯುವಕ ಹರೀಶ್‌ಗೆ ಚೂರಿಯಿಂದ ಇರಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಹರೀಶ್ ಜೊತೆಗಿದ್ದ ನೀತುಗೂ ಇರಿತದಿಂದ ಗಾಯವಾಗಿದೆ. ಗಾಯಗೊಂಡ ಇಬ್ಬರನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳಾದ ಅಜ್ಜಾವರ ಗ್ರಾಮದ ಕಾಂತಮಂಗಲ ಗಂಧದಗುಡ್ಡೆ ನಿವಾಸಿಗಳಾದ ದಯಾನಂದ ಮತ್ತು ರಾಜೇಶ್ ಬಿ.ಆರ್. ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಚೂರಿ ಇರಿತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *