Breaking News

ಸ್ನೇಹಿತನಿಂದ ಸಾಲ ವಾಪಸ್‌ ಕೇಳಿದ್ದಕ್ಕೆ ಚೂರಿಯಿಂದ ಇರಿದು ಕೊಲೆಗೆ ಯತ್ನ

ಪಡುಬಿದ್ರಿ: ಎರಡು ವರ್ಷಗಳ ಹಿಂದೆ ಕೊಟ್ಟ ಸಾಲದ ಹಣವನ್ನು ವಾಪಸ್‌ ಕೇಳಿದ್ದಕ್ಕಾಗಿ ಹೆಜಮಾಡಿ ಗುಂಡಿ ನಿವಾಸಿ ಧೀರಜ್‌ ಎಂಬವರು ಬಜಗೋಳಿಯ ಸುಮಿತ್‌ ಎಸ್‌. ಸುವರ್ಣ(29) ಎಂಬವರಿಗೆ ಹೆಜಮಾಡಿಯ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಹೊಟ್ಟೆಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಸುಮಿತ್‌ ಅವರು ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿ ಧೀರಜ್‌ನನ್ನು ಪಡುಬಿದ್ರಿ ಪೊಲೀಸರು ಮಣಿಪಾಲದಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *