Breaking News

115 ಖಾಲಿ ಎಲ್‌ಪಿಜಿ ಸಿಲಿಂಡರ್ ಅಕ್ರಮ ದಾಸ್ತಾನು: ವ್ಯಕ್ತಿ ವಿರುದ್ಧ ಎಫ್‌ಐಆರ್‌

ವಿಜಯಪುರ (ದೇವನಹಳ್ಳಿ): ಹೋಬಳಿಯ ಹುರುಳುಗುರ್ಕಿ ಗ್ರಾಮದ ಅಲ್ಲಾಬಕಾಶ್ ಅವರಿಗೆ ಸೇರಿದ ಶೆಡ್‍ವೊಂದರಲ್ಲಿ ಪರವಾನಗಿ ಇಲ್ಲದೇ ಅಕ್ರಮವಾಗಿ ಗೃಹಬಳಕೆಯ ಖಾಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ದಾಸ್ತಾನು ಮಾಡಿಕೊಂಡಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಯಲಹಂಕದ ಲಾಲ್‍ಸಿಂಗ್ (42) ವಿರುದ್ಧ ವಿಜಯಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಆಹಾರ ಶಿರಸ್ತೇದಾರ ರವಿಸೂರ್ಯವಂಶಿ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಶನಿವಾರ ಸ್ಥಳ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ 5 ಕೆ.ಜಿವುಳ್ಳ 15, 14 ಕೆ.ಜಿ 100 ಖಾಲಿ ಗ್ಯಾಸ್ ಸಿಲಿಂಡರ್ ಹಾಗೂ ತ್ರಿಚಕ್ರ ವಾಹನ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಸ್ಫೋಟಕ ವಸ್ತುಗಳ ಬಗ್ಗೆ ನಿರ್ಲಕ್ಷ್ಯ ವಹಿಸಿ ಪರವಾನಿಗೆ ಪಡೆಯದೇ ಅಕ್ರಮವಾಗಿ ಖಾಲಿ ಎಲ್‍ಪಿಜಿ ಗ್ಯಾಸ್ ಸಿಲಿಂಡರ್‌ ದಾಸ್ತಾನು ಮಾಡಿದ ಆರೋಪ ಮೇಲೆ ಲಾಲ್ ಸಿಂಗ್ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಹಾರ ಶಿರಸ್ತೇದಾರ ರವಿಸೂರ್ಯವಂಶಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *