Breaking News

13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಉಡುಪಿ: ಸುಮಾರು 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಸೋಮವಾರ(ಮಾ16) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಉಪ್ಪಿನಂಗಡಿಯ ಕೊಯ್ಲ ಗ್ರಾಮದ ಗಂಡಿ ಬಾಗಿಲು ನಿವಾಸಿ ಆರಿಫ್ ಎಂಬಾತನಾಗಿದ್ದಾನೆ. ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ವಾರೆಂಟ್ ಸಿಬಂದಿಗಳಾದ ಸುರೇಶ್ ಕುಮಾರ್ ಮತ್ತು ವಿಶ್ವನಾಥ್ ಅವರು ಬೆಳಗ್ಗೆ ಕೊಯ್ಲದಲ್ಲಿ ಬಂಧಿಸಿ ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಮಾರ್ಚ್ 28 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *