ಮಂಡ್ಯ : ಮನೆಯ ಆವರಣದಲ್ಲಿ ಕೆಲಸ ಮಾಡುತ್ತಿದ್ದಾಗ ದಾಳಿ ಮಾಡಿದ ದುಷ್ಕರ್ಮಿಗಳು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಸಮೀಪದ ಮಳವಳ್ಳಿ ತಾಲೂಕಿನ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಯಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ.ನಗರ ನಿವಾಸಿ ಯಶೋಧಮ್ಮ ಮಾಲೀಕತ್ವದ ತೋಟದ ಮನೆಯಲ್ಲಿ ಜಮೀನು ಕೆಲಸ ಮಾಡಿಕೊಂಡಿದ್ದ ಚಂದ್ರು ಮತ್ತು ಕವಿತ ಅವರ ಮೇಲೆ ಮಾ. 15 ರಂದು ಭಾನುವಾರ ರಾತ್ರಿ 9 ರ ಸಮಯದಲ್ಲಿ ಏಕಾಏಕಿ ದಾಳಿ ಮಾಡಿದ ಇಬ್ಬರು ದುಷ್ಕರ್ಮಿಗಳು ಮಾರಾಕಾಸ್ತ್ರಗಳನ್ನು ತೋರಿಸಿ ಬಲ ಕಿವಿಯಲ್ಲಿ ಧರಿಸಿದ್ದ 3 ಗ್ರಾಂ ತೂಕದ ಚಿನ್ನದ ಅಭರಣವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

