Breaking News

ಸಾಲ ಬಾಧೆಗೆ ರೈತ ಆತ್ಮಹತ್ಯೆ

ಹಗರಿಬೊಮ್ಮನಹಳ್ಳಿ: ಸಾಲ ಬಾಧೆ ತಾಳಲಾರದೇ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.16ರ ಸೋಮವಾರ ನಡೆದಿದೆ. ತಾಲೂಕಿನ ರಾಮೇಶ್ವರ ಬಂಡಿ ಗ್ರಾಮದ ವಸಂತ ಸೊನ್ನದ (34) ಮೃತಪಟ್ಟ ರೈತ. ಮಾ.12ರ ಗುರುವಾರ ರೈತ ವಸಂತ ತಮ್ಮ ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಕೂಡಲೇ ಕುಟುಂಬದವರು ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಕೊಟ್ಟಳ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ (ಇಂದು) ಬೆಳೆಗ್ಗೆ ಸುಮಾರು 7 ಗಂಟೆಗೆ ಮೃತಪಟ್ಟಿದ್ದಾರೆ. ತಂಬ್ರಹಳ್ಳಿ ಗ್ರಾಮದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೂರಿನ ಮೇರೆಗೆ ತನಿಖೆ ಕೈಗೊಳ್ಳಲಾಗಿದೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *