Breaking News

10 ವರ್ಷದ ಬಾಲಕಿಯನ್ನು ಬಲವಂತದಿಂದ ಹಿಡಿದು ಎದೆ ಮುಟ್ಟಿದ 65ರ ಮುದುಕ

ಚಾಮರಾಜನಗರ: ಅರವತ್ತೈದು ವರ್ಷದ ವ್ಯಕ್ತಿ ೧೦ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಪ್ಪಿಗೆ ಜೈಲು ಪಾಲಾದ ಘಟನೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ ನಡೆದಿದೆ. ಹಸಗೂಲಿ ಗ್ರಾಮದ ಮಹದೇವಪ್ಪ(65) ಆರೋಪಿ. ಈತ ಅದೇ ಗ್ರಾಮದ 10 ವರ್ಷ ವಯಸ್ಸಿನ ಐದನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಎದೆ ಚಿವುಟಿ ಗಾಯಗೊಳಿಸಿದ್ದಾನೆ ಎಂದು ತಾಲೂಕಿನ ಬೇಗೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಮಹದೇವಪ್ಪನ ಮೇಲೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)‌ ಯು/ಎಸ್-‌75(2) ರಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸಲು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ ಭಾನುವಾರ ರಜಾ ದಿನವಾದ್ದರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಹಾಗೂ ಆಕೆಯ ಸಹೋದರಿ ಮನೆಯಲ್ಲಿಯೇ ಇದ್ದರು. ತಂದೆ ಹಾಗೂ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾರೆ. ಭಾನುವಾರ ಮಧ್ಯಾಹ್ನ ಅಂಗಡಿಗೆ ಸೋಪು ತರಲು ಹೋಗಿದ್ದ ಬಾಲಕಿಯನ್ನು ಆರೋಪಿ ಮಹದೇವಪ್ಪ ನಿಮ್ಮ ಅಮ್ಮ ಎಲ್ಲಿ ಎಂದು ಕೇಳುತ್ತ, ಬಾಲಕಿಯ ಹಿಡಿದು ತಬ್ಬಿಕೊಂಡು ಆಕೆಯ ಎದೆಯನ್ನೆಲ್ಲ ಮುಟ್ಟಿ ಚಿವುಟಿದ್ದಾನೆ. ಬಾಲಕಿ ಕಿರುಚಿಕೊಂಡಾಗ ಬಿಟ್ಟಿದ್ದಾನೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಬೇಗೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *