Breaking News

ರಾಯಚೂರಲ್ಲಿ ಘೋರ ದುರಂತ : ಬಸ್ ನಿಲ್ದಾಣದಲ್ಲಿ KKRTC ಬಸ್ ಹರಿದು ಸ್ಥಳದಲ್ಲೇ ಮಹಿಳೆ ಸಾವು

ರಾಯಚೂರು ಜಿಲ್ಲೆಯ ಸಿಂಧನೂರು ಬಸ್ ನಿಲ್ದಾಣದ ಮುಖ್ಯದ್ವಾರದ ಬಳಿ ಕೆಕೆಆರ್ಟಿಸಿ (KKRTC) ಬಸ್ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮವಾರ ಈ ಘಟನೆ ನಡೆದಿದ್ದು, ಬಸ್ ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮೃತರನ್ನು ದೊಡ್ಡ ಈರಮ್ಮ (38) ಎಂದು ಗುರುತಿಸಲಾಗಿದೆ. ಕೊಪ್ಪಳ ಜಿಲ್ಲೆಯ ಬೆವಿನಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿಂಧನೂರು ಬಸ್ ನಿಲ್ದಾಣದ ಎಂಟ್ರೆನ್ಸ್ ಗೇಟ್ ಬಳಿ ದುರಂತ ಸಂಭವಿಸಿದೆ. ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ನಿಲ್ದಾಣದಲ್ಲೇ ನಡೆದ ಈ ಭೀಕರ ಅಪಘಾತ ಅಲ್ಲಿನ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *