ದೆಹಲಿಯ ಪಲಮ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ತಗುಲಿರುವ ದುರ್ಘಟನೆ ಸಂಭವಿಸಿದೆ. ಆರಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಮಾಹಿತಿ ಸದ್ಯಕ್ಕೆ ತಿಳಿದುಬಂದಿದೆ. ಇನ್ನೂ ಹಲವಾರು ಜನರಿಗೆ ಗಾಯಗಳಾಗಿವೆ. ದುರಂತದಲ್ಲಿ ಮೃತಪಟ್ಟಿರುವವರ ಪೈಕಿ ಮೂವರು ಮಕ್ಕಳಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಕಿ ದುರಂತಕ್ಕೆ ಏನು ಕಾರಣ ಎಂದು ಸದ್ಯಕ್ಕೆ ತಿಳಿದುಬಂದಿಲ್ಲ. ಕಟ್ಟಡಕ್ಕೆ ಬೆಂಕಿ ತಗುಲಿರುವ ಬಗ್ಗೆ ಅಗ್ನಿಶಾಮಕ ವಿಭಾಗಕ್ಕೆ ಬೆಳಗ್ಗೆ 7:30ಕ್ಕೆ ಮಾಹಿತಿ ಹೋಗಿದೆ. ಕೂಡಲೇ 30 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಮತ್ತು ಜನರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಲಾಗಿದೆ. ಪೊಲೀಸ್ ಹಾಗು ಇತರ ತುರ್ತು ಸೇವೆಗಳೂ ಕೂಡ ಸ್ಥಳಕ್ಕೆ ಬಂದು ಕಾರ್ಯಾಚರಣೆಲ್ಲಿ ನೆರವಾಗುತ್ತಿದ್ದಾರೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಆರು ಮಂದಿ ಮೃತಪಟ್ಟಿದ್ದು, ಕೆಲ ಜನರು ಈಗಲೂ ಕಟ್ಟಡದಲ್ಲಿ ಸಿಲುಕಿದ್ದಾರೆ. ಜಿಲ್ಲಾಡಳಿತ, ಅಗ್ನಿಶಾಮಕ ಇಲಾಖೆ, ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಟ್ವೀಟ್ ಮಾಡಿರುವ ಸಿಎಂ ರೇಖಾ ಗುಪ್ತಾ, ಘಟನೆಯನ್ನು ನ್ಯಾಯಾಂಗ ತನಿಖೆ ನಡೆಸುವಂತೆ ಆದೇಶಿಸಿರುವುದಾಗಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

