Breaking News

ಉಡುಪಿ: ಗ್ಯಾಸ್​​ ಅಭಾವವನ್ನೇ ಬಂಡವಾಳ ಮಾಡಿಕೊಂಡ ಆನ್‌ಲೈನ್‌ ವಂಚಕರು ; ಎಪಿಕೆ ಆಯಪ್ ಕಳುಹಿಸಿ ಗ್ರಾಹಕರಿಗೆ ವಂಚನೆ

ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡಿರುವ ಆನ್‌ಲೈನ್‌ ವಂಚಕರು ಅನಾಮಧೇಯ ಎಪಿಕೆ ಫೈಲ್‌ಗಳನ್ನು ಕಳುಹಿಸಿ ಗ್ರಾಹಕರನ್ನು ವಂಚಿಸುವ ಘಟನೆಗಳು ನಡೆಯುತ್ತಿವೆ. ಮುಂಬಯಿಯಲ್ಲಿದ್ದು ಸದ್ಯ ಉಡುಪಿಯಲ್ಲಿರುವ ಲೀಲಿ ಪ್ಲೋರಿನ್ ಡಿಸಿಲ್ವಾ ವಂಚನೆಗೊಳಗಾದವರು. ಅವರಿಗೆ ಮಾ.11 ರಂದು ಬೆಳಗ್ಗೆ 11.30ಕ್ಕೆ ಮುಂಬಯಿಯ ಮಹಾನಗರ ಗ್ಯಾಸ್ ಲಿಮಿಡೆಟ್ ನಿಂದ ದೇವೇಶ ಜೋಷಿ ಕರೆ ಮಾಡಿ ಗ್ಯಾಸ್ ಗೆ ಆನ್‌ಲೈನ್‌ನಲ್ಲಿ ಹಣ ಪಾವತಿಸಿರುವ ಬಗ್ಗೆ ಅಪ್‌ಡೇಟ್ ಆಗಿಲ್ಲ ಎಂದು ತಿಳಿಸಿ ವಾಟ್ಸ್ ಆಯಪ್ ನಲ್ಲಿ ಮಹಾನಗರ ಗ್ಯಾಸ್ ಎಪಿಕೆ ಆಯಪ್ ಕಳುಹಿಸಿ ಅದನ್ನು ಡೌನ್‌ಲೋಡ್ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ಲೀಲಿ ಪ್ಲೋರಿನ್ ಡಿಸಿಲ್ವಾ ಅದನ್ನ ಡೌನ್‌ಲೋಡ್ ಮಾಡಿದ್ದಾರೆ. ಈ ವೇಳೆ ತಾಂತ್ರಿಕ ದೋಷ ಕಂಡುಬಂದ ಪರಿಣಾಮ ಆರೋಪಿಯು ಲೀಲಿ ಪ್ಲೋರಿನ್ ಡಿಸಿಲ್ವಾ ಅವರ ಪತಿಯ ಕೆನರಾ ಬ್ಯಾಂಕ್ ಸಂತೆಕಟ್ಟೆ ಬ್ರಾಂ ಖಾತೆ ಸಂಖ್ಯೆ ಪಡೆದುಕೊಂಡಿದ್ದಾರೆ. ಅನಂತರ ಅವರ ಎರಡೂ ಬ್ಯಾಂಕ್ ಖಾತೆಗಳಿಂದ ಒಟ್ಟು 69,005 ರೂ.ಕಡಿತಗೊಂಡಿದೆ. ಈ ವಂಚನೆಯ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *