Breaking News

ಶ್ರೀರಾಮ ಕ್ರೆಡಿಟ್ ಕೊಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ: ತನಿಖೆ ಆರಂಭಿಸಿದ CID

ಬೆಳ್ತಂಗಡಿ: ಇಲ್ಲಿನ ಶ್ರೀರಾಮ ಕ್ರೆಡಿಟ್ ಕೊಆಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು ₹ 40 ಕೋಟಿಯನ್ನು ವಾಪಾಸ್ ನೀಡದೆ ವಂಚನೆ ‌ಮಾಡಿರುವ ಪ್ರಕರಣ ಸಂಬಂಧ ಸೊಸೈಟಿಗೆ ಬೆಂಗಳೂರಿನಿಂದ ಸಿಐಡಿ ತನಿಖಾ ತಂಡ ಮಂಗಳವಾರ ಬಂದಿದ್ದು, ತನಿಖೆ ಆರಂಭಿಸಿದೆ. ನಗರದ ಜೂನಿಯರ್ ಕಾಲೇಜು ರಸ್ತೆಯಲ್ಲಿದ್ದ ಈ ಸೊಸೈಟಿ 25 ವರ್ಷಗಳಿಂದ ಏಕೈಕ ಶಾಖೆಯಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ ಈ ಸೊಸೈಟಿಯಲ್ಲಿ ಗ್ರಾಹಕರು ಇಟ್ಟಿದ್ದ ಸುಮಾರು ₹40 ಕೋಟಿಯನ್ನು ಗ್ರಾಹಕರಿಗೆ ನೀಡದೆ ಸೊಸೈಟಿಯ ಸಿಇಒ, ಆಡಳಿತ ಮಂಡಳಿ ಹಾಗೂ ಬ್ಯಾಂಕ್ ಸಿಬ್ಬಂದಿ ವಂಚನೆ ಮಾಡಿರುವುದಾಗಿ ಬೆಳ್ತಂಗಡಿ ನಿವಾಸಿ ದಯಾನಂದ ನಾಯಕ್ ಸಹಿತ 13 ಮಂದಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ₹ 40 ಕೋಟಿ ವಂಚನೆ ಪ್ರಕರಣವಾಗಿರುವ ಕಾರಣದಿಂದ ಈ ತನಿಖೆಯನ್ನು ಬೆಳ್ತಂಗಡಿ ಪೊಲೀಸರು ಮಂಗಳೂರು ಸೆನ್ ಪೊಲೀಸ್ ಠಾಣೆಗೆ ಹಸ್ತಾಂತರ ಮಾಡಿದ್ದರು. ಬಳಿಕ ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿ ಸಿಐಡಿಗೆ ಹಸ್ತಾಂತರಿಸಿದ್ದರು. ಬೆಂಗಳೂರು ಸಿಐಡಿ ಇನ್‌ಸ್ಪೆಕ್ಟರ್‌ ಹರೀಶ್ ನೇತೃತ್ವದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *