Breaking News

ಸಂತೆಕಟ್ಟೆಯಲ್ಲಿ ಸರಣಿ ಅಪಘಾತ: ಹಲವರಿಗೆ ಗಾಯ

ಉಡುಪಿ: ಸಂತೆಕಟ್ಟೆಯಲ್ಲಿ ಬುಧವಾರ ಸರಣಿ ಅಪಘಾತ ನಡೆದು ಹಲವರು ಗಾಯಗೊಂಡಿದ್ದಾರೆ. ಕುಂದಾಪುರದಿಂದ ಉಡುಪಿ ಕಡೆಗೆ ಬಲೆನೊ ಹಾಗೂ ಇಟಿಯೋಸ್ ಕಾರು ಬರುತ್ತಿತ್ತು. ಈ ವೇಳೆ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿದ್ದ ಬಲೆನೊ ಕಾರು, ಚಾಲಕನ ನಿಯಂತ್ರಣ ಕಳೆದುಕೊಂಡು ಉಡುಪಿಯಿಂದ ಕುಂದಾಪುರ ಕಡೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬಲೆನೊ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಜಗದೀಶ್ ತೋಳಾರ್ ಗಾಯಗೊಂಡಿದ್ದಾರೆ. ಇಟಿಯೋಸ್ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆೆಗೆ ದಾಖಲಿಸಲಾಗಿದೆ. ಅಪಘಾತದ ವೇಳೆ ಇನ್ನೊಂದು ಕಾರಿಗೂ ಹಾನಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿದ್ದ ಕೆಲವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಬಸ್ಸಿನ ಮುಂಭಾಗಕ್ಕೆ ಸಂಪೂರ್ಣ ಹಾನಿಯಾಗಿದೆ. ಬಸ್‌ ಪ್ರಯಾಣಿಕರನ್ನು ಬೇರೆ ಬಸ್‌ ಮೂಲಕ ಕಳುಹಿಸಿಕೊಡಲಾಯಿತು. ಘಟನಾ ಸ್ಥಳಕ್ಕೆ ಸಂಚಾರ ಪೊಲೀಸ್‌ ಠಾಣೆಯ ಸಿಬಂದಿ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *