Breaking News

ರಸ್ತೆ ಅಪಘಾತ: ವ್ಯಕ್ತಿಯ ಸಾವಿಗೆ ಕಾರಣನಾದ ಚಾಲಕನಿಗೆ 2 ವರ್ಷ ಜೈಲು ಶಿಕ್ಷೆ, ದಂಡ

ಸಾಗರ: ತಾಲ್ಲೂಕಿನ ಗೌತಮಪುರ ಗ್ರಾಮದ ಬಳಿ ಹಾಲು ಸಾಗಿಸುವ ಕ್ಯಾಂಟರ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಮಾರುತಿ ಓಮಿನಿಗೆ ಡಿಕ್ಕಿ ಹೊಡೆಸಿ, ಅದರಲ್ಲಿದ್ದ ವ್ಯಕ್ತಿಯ ಸಾವಿಗೆ ಕಾರಣನಾದ ಚಾಲಕನಿಗೆ ಇಲ್ಲಿನ ಹಿರಿಯ ವಿಭಾಗದ ಪ್ರಧಾನ ಸಿವಿಲ್ ನ್ಯಾಯಾಧೀಶರ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ, ₹ 35 ಸಾವಿರ ದಂಡ ವಿಧಿಸಿದೆ. ಶಿಕಾರಿಪುರದ ಇನಾಮ್ ಅಗ್ರಹಾರ ಬಡಾವಣೆಯ ಶಿವಾನಂದ ಟಿ.ಟಿ. ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ. 2024ರ ಸಾಲಿನ ಜೂನ್ 23ರಂದು ಗೌತಮಪುರ ಸಮೀಪ ಶಿಕಾರಿಪುರ ಕಡೆಯಿಂದ ಬರುತ್ತಿದ್ದ ಓಮಿನಿಗೆ ಶಿವಾನಂದ ಅವರು ಚಲಾಯಿಸುತ್ತಿದ್ದ ವಾಹನ ಡಿಕ್ಕಿ ಹೊಡೆಸಿದ ಪರಿಣಾಮ ಕಾರಿನಲ್ಲಿದ್ದ ಈರಪ್ಪ ಎಂಬ ವ್ಯಕ್ತಿ ಸ್ಥಳದಲ್ಲೆ ಮೃತಪಟ್ಟಿದ್ದರು. ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿ ವಿರುದ್ಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಟರಾಜ್ ಎಸ್. ಅವರು ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಶಿಕ್ಷೆ ವಿಧಿಸಿದ್ದಾರೆ.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *