Breaking News

ಕಾರಿನಲ್ಲಿ ಜಾನುವಾರು ಸಾಗಾಟ ಪತ್ತೆ

ಬಜಪೆ: ತೆಂಕ ಎಡಪದವು ಗ್ರಾಮದ ಸಾಸ್ತಾವು ದೇವಸ್ಥಾನದ ಬಳಿ ಫಾರ್ಚೂನರ್‌ ಕಾರಿನಲ್ಲಿ ದನಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದುದನ್ನು ಪತ್ತೆ ಹಚ್ಚಿದ ಗಸ್ತು ನಿರತ ಬಜಪೆ ಪೊಲೀಸರು, ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜಾನುವಾರುಗಳನ್ನು ರಕ್ಷಿಸಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಕಾರಿನಲ್ಲಿ 4 ದನಗಳನ್ನು ಕೈ ಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿತ್ತು. ದನಗಳನ್ನು ಎಲ್ಲಿಂದಲೋ ಕಳವು ಮಾಡಿಕೊಂಡು ಬಂದು, ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ವಶಕ್ಕೆ ಪಡೆದ ಕಾರಿನ ಅಂದಾಜು ಮೊತ್ತ 8 ಲಕ್ಷ ರೂಪಾಯಿ ಆಗಬಹುದು. ಕಾರಿನಲ್ಲಿ ಒಂದು ತಲವಾರು, ಕಬ್ಬಿಣದ ರಾಡ್‌ 1, ನೈಲಾನ್‌ ಹಗ್ಗಗಳು 3, ಡಿಎಲ್‌ 10 ಎಎನ್‌ 6227 ನಂಬರ್‌ಪ್ಲೇಟ್‌ ಗಳು 2 ಹಾಗೂ ನೀಲಿ ಬಣ್ಣದ ಟಾರ್ಪಾಲ್‌ ಸಿಕ್ಕಿದೆ. ಜಾನುವಾರು ಸಹಿತ ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 8,42,000 ರೂಪಾಯಿ ಎಂದು ಅಂದಾಜಿಸಲಾಗಿದೆ.

Share News

About BigTv News

Check Also

ಹುಬ್ಬಳ್ಳಿ ಸಿದ್ಧಾರೂಢ ಮಠದ ಬಳಿ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ದಾಖಲು

ಹುಬ್ಬಳ್ಳಿ: ಸಿದ್ಧಾರೂಢ ಮಠದ ಪುಷ್ಕರಣಿ ಬಳಿಯ ಶೌಚಾಲಯದ ಹಿಂಭಾಗ 50 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಳೇಹುಬ್ಬಳ್ಳಿ …

Leave a Reply

Your email address will not be published. Required fields are marked *