Breaking News

ಎಕ್ಸ್‌ಪ್ರೆಸ್ ವೇಯಲ್ಲಿ ಗೂಡ್ಸ್ ವಾಹನ ಅಪಘಾತ – ಒಬ್ಬ ಸಾ*ವು, ಮತ್ತೋರ್ವ ಗಂಭೀರ.!

ರಾಮನಗರ ತಾಲೂಕಿನ ಮಾಯಗಾನಹಳ್ಳಿ ಸಮೀಪ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಅಮೀರ್ (25) ಎಂಬುವವರು ಮೃತಪಟ್ಟಿದ್ದಾರೆ. ಗೂಡ್ಸ್ ವಾಹನ ಮೈಸೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ವಾಹನ ಸಂಪೂರ್ಣ ಜಖಂಗೊಂಡಿದ್ದು, ಮುಂಭಾಗ ತೀವ್ರ ಹಾನಿಗೊಳಗಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ರಾಮನಗರ ಟ್ರಾಫಿಕ್ ಪೊಲೀಸರು ಪರಿಶೀಲನೆ ನಡೆಸಿ ಅಪಘಾತದ ಕಾರಣ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *