Breaking News

ಯುಗಾದಿ ಹಬ್ಬದ ದಿನವೇ ಬೆಂಗಳೂರಲ್ಲಿ ನಿಗೂಢ ಸ್ಪೋಟ : ಮೂವರಿಗೆ ಗಂಭೀರ ಗಾಯ.!

ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಬಳಿ ಇರುವ ಬಿಲ್ಡಿಂಗ್‌ನ ನಾಲ್ಕನೇ ಮಹಡಿಯ ಮನೆಯೊಂದರಲ್ಲಿ ಈ ಸ್ಫೋಟ ಸಂಭವಿಸಿದೆ. ಗಾಯಗೊಂಡವರನ್ನು ಉತ್ತರ ಪ್ರದೇಶ ಮೂಲದ ಅಭಿನಂದನ್ ಶರ್ಮಾ, ಅಭಿಷೇಕ್ ಶರ್ಮಾ ಮತ್ತು ರಾಮ್ ಭಚನ್ ಶರ್ಮಾ ಎಂದು ಗುರುತಿಸಲಾಗಿದೆ. ಇವರು ಸೋಂಪುರ ಕೈಗಾರಿಕಾ ಪ್ರದೇಶದ ಮಾರುತಿ ಸುಜುಕಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್‌ಗಳಾಗಿ ಕೆಲಸ ಮಾಡುತ್ತಿದ್ದರು. ಮೇಲ್ನೋಟಕ್ಕೆ ಅಡುಗೆ ಅನಿಲ (LPG) ಸೋರಿಕೆಯಾಗಿ ಈ ಸ್ಫೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಕಿಟಕಿ ಗಾಜುಗಳು ಪುಡಿಯಾಗಿದ್ದು, ಗೋಡೆಗಳಿಗೂ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಡಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *