Breaking News

ಬಸ್ -ಆಟೋ ನಡುವೆ ಢಿಕ್ಕಿ; ಓರ್ವ ಮೃತ್ಯು, ಮೂವರಿಗೆ ಗಾಯ

ಶಿವಮೊಗ್ಗ : ಖಾಸಗಿ ಬಸ್ ಹಾಗೂ ಆಟೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ರಾಸ್ ಬಳಿ ನಡೆದಿದೆ. ಶಿವಮೊಗ್ಗದ ಬುದ್ಧನಗರದ ನಿವಾಸಿ ಪ್ರೇಮ್ ಕುಮಾರ್ (24) ಅಪಘಾತದಲ್ಲಿ ಮೃತಪಟ್ಟ ಯುವಕ. ಆಟೋದಲ್ಲಿದ್ದ ಮನೋಜ್ (21), ಪವನ್ (21) ಹಾಗೂ ಗಿರೀಶ್ (21) ಎಂಬುವವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಪ್ರೇಮ್ ಕುಮಾರ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ನಾಲ್ವರು ಪ್ರಯಾಣಿಕರಿದ್ದ ಆಟೋ ಶಿವಮೊಗ್ಗದಿಂದ ಸಕ್ರೇಬೈಲು ಕಡೆಗೆ ತೆರಳುತಿತ್ತು. ಈ ವೇಳೆ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *