Breaking News

ಮುಳಬಾಗಿಲು | ಗಾಂಜಾ ಮಾರಾಟ: ಆರೋಪಿ ಬಂಧನ

ಅಕ್ರಮವಾಗಿ ಯುವಕರಿಗೆ ಪ್ರತಿನಿತ್ಯ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮುಳಬಾಗಿಲು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮುಳಬಾಗಿಲು ನಗರದ ಶಾಮಿರ್ ಮೊಹಲ್ಲಾ ನಿವಾಸಿ ಶಾಮಿರ್ ಪಾಷಾ (38) ಬಂಧಿತ ಆರೋಪಿ. ಬಂಧಿತನಿಂದ ₹50 ಸಾವಿರ ಮೌಲ್ಯದ 1.ಕೆಜಿ 150 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಶಾಮಿರ್ ಪಾಷಾ ಪ್ರತಿನಿತ್ಯ ನಗರದ ಸೋಮೇಶ್ವರ ಪಾಳ್ಯದ ಉದ್ಯಾನವನದ ಬಳಿಯಲ್ಲಿ ಯುವಕರಿಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಇನ್‌ಸ್ಪೆಕ್ಟರ್ ಅಣ್ಣಯ್ಯ ಹಾಗೂ ಶಿವರಾಜ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *