Breaking News

ಮದುವೇಲಿ ಮಕ್ಕಳ ಗುರಿಯಾಗಿಸಿ ಚಿನ್ನ ಕದಿಯುತ್ತಿದ್ದ ಆರೋಪಿ ಸೆರೆ

ಬೆಂಗಳೂರು: ಅರಮನೆ ಮೈದಾನ, ಕಲ್ಯಾಣ ಮಂಟಪಗಳಲ್ಲಿ ಚಿಕ್ಕ ಮಕ್ಕಳನ್ನು ಗುರಿಯಾಗಿಸಿಕೊಂಡು ಅವರು ಧರಿಸಿದ್ದ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಂದ್ರಹಳ್ಳಿ ನಿವಾಸಿ ಬಾಬು ಅಲಿಯಾಸ್‌ ಪಲ್ಸರ್‌ ಬಾಬು (45) ಬಂಧಿತ. ಆರೋಪಿಯಿಂದ 42.38 ಲಕ್ಷ ರೂ. ಮೌಲ್ಯದ 132 ಗ್ರಾಂ ಚಿನ್ನಾಭರಣ, 1.20 ಲಕ್ಷ ರೂ. ನಗದು, 7 ಮೊಬೈಲ್‌, 2 ಲ್ಯಾಪ್‌ಟಾಪ್‌, 2 ಕಾರು, 4 ಬೈಕ್‌ ವಶಕ್ಕೆ ಪಡೆಯಲಾಗಿದೆ. ಆರೋಪಿ 2025ರ ಮೇನಲ್ಲಿ ಅರಮನೆ ಮೈದಾನದಲ್ಲಿ ನಡೆದ ಮದುವೆ ವೇಳೆ ಮಗು ಬಳಿ ಚಿನ್ನದ ಸರ ಕಳವು ಮಾಡಿದ್ದ. ಅರಮನೆ ಮೈದಾನದಲ್ಲಿ ಪೊಲೀಸರು ಶಂಕೆಯ ಮೇರೆಗೆ ಈತನನ್ನು ಹಿಡಿದು ವಿಚಾರಣೆಗೆ ಒಳಪಡಿಸಿದಾಗ ಕಳ್ಳತನ ಕೃತ್ಯಗಳು ಬೆಳಕಿಗೆ ಬಂದಿವೆ. 8-9 ವರ್ಷಗಳಿಂದ ಮದುವೆ ಮನೆಯಲ್ಲಿ ಮಕ್ಕಳನ್ನು ಗುರಿಯಾಗಿಸಿ ಚಿನ್ನಾಭರಣ ಕಳವು ಮಾಡುತ್ತಿದ್ದ. ಮಾರಾಟ ಮಾಡಿದ ಹಣದಲ್ಲಿ ಮೋಜಿನ ಜೀವನ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *