Breaking News

ಯುವಕನನ್ನು ಹತ್ಯೆಗೈದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಟರು!

ಹಾಸನ ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದ್ದು,‌ ದುಷ್ಟರು ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದು ಸುಟ್ಟು ಹಾಕಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ವರುಣ್.ಕೆ.ಎಂ (22) ಎಂದು ಗುರುತಿಸಲಾಗಿದೆ.ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ಯುವಕನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಬಳಿಕ ವರುಣ್ ಶವದ ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ್ದಾರೆ. ಮಾ.15 ರಂದು ಗಂಡಸಿ ಪೊಲೀಸ್ ಠಾಣೆಯಲ್ಲಿ ವರುಣ್ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವರುಣ್‌ ಸ್ನೇಹಿತ ನೀಡಿದ ಸುಳಿವಿನ ಮೇಲೆ ತನಿಖೆ ನಡೆಸಿದಾಗ ಹತ್ಯೆಯ ಸುಳಿವು ಸಿಕ್ಕಿದೆ. ಸದ್ಯ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *